Business

SUDDIGAGI SIDDU NEWS

Theme images by kelvinjay. Powered by Blogger.

ಜನಪ್ರಿಯ ಸುದ್ದಿಗಳು

Life & style

Games

Sports

» »Unlabelled » ಮುದ್ದೇಬಿಹಾಳದಲ್ಲಿ ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಲು ಪುರಸಭೆಗೆ ಸಾರ್ವಜನಿಕರ ಮನವಿ

ಚರಂಡಿ ಸ್ವಚ್ಛತೆ, ಅನಧಿಕೃತ ಕಟ್ಟಡ ತೆರವಿಗೆ ಆಗ್ರಹ


ಮುದ್ದೇಬಿಹಾಳ: ಪಟ್ಟಣದ ಇಂದಿರಾ ನಗರದ ಸರ್ವೆ ನಂ.59ರಲ್ಲಿ ಸಾರ್ವಜನಿಕರಿಗಾಗಿ ನಿರ್ಮಿಸಿರುವ ಚರಂಡಿಯನ್ನು ಸ್ವಚ್ಛಗೊಳಿಸಿ, ಅನಧಿಕೃತವಾಗಿ ನಿರ್ಮಿಸಿರುವ ಕಟ್ಟಡಗಳನ್ನು ತೆರವುಗೊಳಿಸುವಂತೆ ಆಗ್ರಹಿಸಿ ಸ್ಥಳೀಯ ನಿವಾಸಿಗಳು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಈ ಕುರಿತು ಮೇ 2ರಂದು ಕೂಡ ಅರ್ಜಿ ಸಲ್ಲಿಸಲಾಗಿತ್ತು ಎಂದು ಮನವಿಯಲ್ಲಿ ತಿಳಿಸಲಾಗಿದೆ. ಮಹಿಬೂಬ ಅವಟಿ ಹಾಗೂ ಓಣಿ ನಿವಾಸಿಗಳು ನೀಡಿದ ಮನವಿಯಲ್ಲಿ, ಸಾರ್ವಜನಿಕರು ಧರಣಿ ನಡೆಸಿದ ವೇಳೆ ಪುರಸಭೆ ಅಧಿಕಾರಿಗಳು ಸ್ಪಂದಿಸಿ ಕೆಲವು ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸಿದ್ದಕ್ಕೆ ಧನ್ಯವಾದ ಸಲ್ಲಿಸಿದ್ದಾರೆ.




ಆದರೆ ತೆರವುಗೊಳಿಸಿದ ಕಟ್ಟಡಗಳ ಅವಶೇಷಗಳನ್ನು ತೆರವು ಮಾಡದಿರುವುದರಿಂದ ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗುತ್ತಿದೆ. ಅಲ್ಲದೆ ಚರಂಡಿಯಲ್ಲಿ ಕೊಳಚೆ ನೀರು ನಿಂತು ದುರ್ವಾಸನೆ ಉಂಟಾಗಿದ್ದು, ಸುತ್ತಮುತ್ತಲಿನ ನಿವಾಸಿಗಳ ಆರೋಗ್ಯದ ಮೇಲೂ ಪರಿಣಾಮ ಬೀರುತ್ತಿದೆ ಎಂದು ದೂರಿದ್ದಾರೆ.

ಸರ್ವೆ ನಂ.59ರಲ್ಲಿ ಇರುವ ಅನಧಿಕೃತ ಕಟ್ಟಡಗಳ ಬಗ್ಗೆ ಸಮಗ್ರ ಮಾಹಿತಿ ಪಡೆದು ನಿಯಮಾನುಸಾರ ಕ್ರಮ ಕೈಗೊಳ್ಳಬೇಕು. ಚರಂಡಿ ನೀರು ಸರಾಗವಾಗಿ ಹರಿಯುವಂತೆ ಸ್ವಚ್ಛತಾ ಕಾರ್ಯ ನಡೆಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.



ಮನವಿ ಸಲ್ಲಿಸಿದವರಲ್ಲಿ ಶರಣು ಹೊಳಿ, ರೇಣುಕಾ ವಾಲಿಕಾರ, ಇಮಾಂಬಿ ವಾಲಿಕಾರ, ಬಂದೇನವಜ್ ಮುಲ್ಲಾ, ಅಬ್ರಾರ್ ಮುಲ್ಲಾ, ಅಬ್ದುಲ್ ಜಬ್ಬಾರ್ ಗೋಲಂದಾಜ್, ಬಾಬಾ ಮುಲ್ಲಾ ಸೇರಿದಂತೆ ಇತರರು ಇದ್ದರು.

«
Next
Newer Post
»
Previous
Older Post

No comments:

Leave a Reply