Business

SUDDIGAGI SIDDU NEWS

Theme images by kelvinjay. Powered by Blogger.

ಜನಪ್ರಿಯ ಸುದ್ದಿಗಳು

Life & style

Games

Sports

» »Unlabelled » ಕುಡಿಯುವ ನೀರಿಗಾಗಿ ತಾಪಂ ಕಚೇರಿಗೆ ಮುತ್ತಿಗೆ : ಖಾಲಿ ಕೊಡಗಳೊಂದಿಗೆ ಗ್ರಾಮಸ್ತರ ಧರಣಿ



ಗುಂಡಕರ್ಜಗಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವಂತೆ ಆಗ್ರಹಿಸಿ ಪಟ್ಟಣದ ತಾಪಂ ಕಚೇರಿ ಎದುರು ಖಾಲಿ ಕೊಡಗಳೊಂದಿಗೆ ಪ್ರತಿಭಟನೆ ನಡೆಸಿದ ಗ್ರಾಮಸ್ಥರು ಮತ್ತು ಮಹಿಳೆಯರು ಇದ್ದರು.
ಕುಡಿಯುವ ನೀರಿಗಾಗಿ ತಾಪಂ ಕಚೇರಿಗೆ ಮುತ್ತಿಗೆ: ಖಾಲಿ ಕೊಡಗಳೊಂದಿಗೆ ಗ್ರಾಮಸ್ಥರ ಧರಣಿ

​ಮುದ್ದೇಬಿಹಾಳ: ರೂಡಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಂಡಕರ್ಜಗಿ ಗ್ರಾಮದಲ್ಲಿ ತೀವ್ರಗೊಂಡಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಖಂಡಿಸಿ ಗ್ರಾಮಸ್ಥರು ಹಾಗೂ ಮಹಿಳೆಯರು ಮಂಗಳವಾರ ಇಲ್ಲಿನ ತಾಲೂಕು ಪಂಚಾಯಿತಿ ಕಚೇರಿ ಎದುರು ಖಾಲಿ ಕೊಡಗಳೊಂದಿಗೆ ಪ್ರತಿಭಟನೆ ನಡೆಸಿ, ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
​ಗ್ರಾಮದ ಕುಡಿಯುವ ನೀರಿನ ಸಮಸ್ಯೆ ಕುರಿತು ಹಲವು ಬಾರಿ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಆರೋಪಿಸಿದ ಗ್ರಾಮಸ್ಥರು, ರೂಡಗಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಭಾರತಿ ಸಿನ್ನೂರ ವಿರುದ್ಧ ಘೋಷಣೆ ಕೂಗಿದರು. ಮಳೆ ಕೊರತೆಯಿಂದ ಗ್ರಾಮದಲ್ಲಿ ಕುಡಿಯುವ ನೀರಿಗೆ ತೀವ್ರ ಹಾಹಾಕಾರ ಉಂಟಾಗಿದ್ದು, ದಿನಗೂಲಿ ಕಾರ್ಮಿಕರಾಗಿರುವ ಜನರಿಗೆ ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.
​ತಾಪಂ ಕಚೇರಿ ಮುಖ್ಯ ಗೇಟ್ ಮುಂದೆ ಖಾಲಿ ಕೊಡಗಳನ್ನು ಇಟ್ಟು ಸತ್ಯಾಗ್ರಹ ನಡೆಸಿದ ಗ್ರಾಮಸ್ಥರು, ಎರಡು ದಿನಗಳೊಳಗೆ ಸಮಸ್ಯೆಯನ್ನು ಬಗೆಹರಿಸದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಾಪಂ ಸಹಾಯಕ ಲೆಕ್ಕಾಧಿಕಾರಿ ವಿರೇಶ ಹುಗಾರ ಅವರು ಹೋರಾಟಗಾರರೊಂದಿಗೆ ಚರ್ಚೆ ನಡೆಸಿ, ತಕ್ಷಣವೇ ಗ್ರಾಮಕ್ಕೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುವುದು ಹಾಗೂ ಎರಡು ದಿನಗಳೊಳಗೆ ಪೈಪ್‌ಲೈನ್ ದುರಸ್ತಿ ಮಾಡಿ ಶಾಶ್ವತ ನೀರು ಸರಬರಾಜು ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.
​ಈ ಸಂದರ್ಭದಲ್ಲಿ ಮಾತನಾಡಿದ ದಲಿತ ಯುವ ಮುಖಂಡ ಆನಂದ ಮುದೂರ, ಗ್ರಾಮದಲ್ಲಿ ಹಲವು ತಿಂಗಳಿಂದ ಕುಡಿಯುವ ನೀರಿನ ಸಮಸ್ಯೆ ಇದ್ದರೂ ಸಂಬಂಧಪಟ್ಟ ಅಧಿಕಾರಿಗಳು ಸ್ಪಂದಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಅಧಿಕಾರಿಗಳು ಲಿಖಿತ ಭರವಸೆ ನೀಡಿದ ಬಳಿಕ ಗ್ರಾಮಸ್ಥರು ತಮ್ಮ ಧರಣಿಯನ್ನು ಹಿಂಪಡೆದರು.
​ಈ ಸಂದರ್ಭದಲ್ಲಿ ಆನಂದ ಮುದೂರ, ಬಸವರಾಜ ಚಲವಾದಿ, ಪರಶುರಾಮ ಬಸರಕೋಡ, ಮುತ್ತು ಅಮರಗೋಳ, ಶ್ರೀಧರ ಮಾದರ, ಶಿವಾನಂದ ಹರಳಿಚಂಡಿ, ರಮಜಾನ್ ಚಪ್ಪರಬಂದ, ಯಲ್ಲಪ್ಪ ಚಲವಾದಿ, ಆಲಮಿ ಚಪ್ಪರಬಂದ, ಸೈಯದ್ ಬಾಗಂ ಚಪ್ಪರಬಂದ, ನೀಲಮ್ಮ ಹರಳಿಚಂಡಿ, ಶಾಜಬಿ ಚಪ್ಪರಬಂದ, ಬಸಲಿಂಗವ್ವ ಬಿರಾದಾರ, ಶ್ರೀದೇವಿ ಹರಳಿಚಂಡಿ, ಶರಣಪ್ಪ ಸುತಗುಂಡರ, ಜಯಂತಿಬಿ ಚಪ್ಪರಬಂದ, ನಾಗಮ್ಮ ಪೂಜಾರಿ ಸೇರಿದಂತೆ ಅನೇಕ ಗ್ರಾಮಸ್ಥರು ಭಾಗವಹಿಸಿದ್ದರು.
ಮುದ್ದೇಬಿಹಾಳ ಠಾಣೆಯ ಪಿಎಸ್‌ಐ ಸಂಜಯ ತಿಪ್ಪಾರಡ್ಡಿ, ಕ್ರೈಂ ಪಿಎಸ್‌ಐ ಆರ್.ಎಸ್. ಬಂಗಿ ಹಾಗೂ ಪೊಲೀಸ್ ಸಿಬ್ಬಂದಿ ಬಂದೋಬಸ್ತ್ ಒದಗಿಸಿದ್ದರು.
​
​

«
Next
Newer Post
»
Previous
Older Post

No comments:

Leave a Reply