Business

SUDDIGAGI SIDDU NEWS

Theme images by kelvinjay. Powered by Blogger.

ಜನಪ್ರಿಯ ಸುದ್ದಿಗಳು

Life & style

Games

Sports

» »Unlabelled » ಆಧಾರರಹಿತ ಆರೋಪ ಮಾಡುವವರ ವಿರುದ್ಧ ಸೋಮೋಟೊ ಪ್ರಕರಣ ದಾಖಲಿಸಿ: ಪೊಲೀಸರಿಗೆ ಶಾಸಕ ನಾಡಗೌಡ ಸೂಚನೆ

 ಆಧಾರರಹಿತ ಆರೋಪ ಮಾಡುವವರ ವಿರುದ್ಧ ಸೋಮೋಟೊ ಪ್ರಕರಣ ದಾಖಲಿಸಿ: ಪೊಲೀಸರಿಗೆ ಶಾಸಕ ನಾಡಗೌಡ ಸೂಚನೆ





ಮುದ್ದೇಬಿಹಾಳ: ತಾಲೂಕಿನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ಹಾಗೂ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್. ನಾಡಗೌಡ ಅವರು ಅಧಿಕಾರಿಗಳಿಗೆ ತೀವ್ರ ಎಚ್ಚರಿಕೆ ನೀಡಿದರು.


ಮತಕ್ಷೇತ್ರದಲ್ಲಿ ಆಧಾರರಹಿತ ಆರೋಪ ಮಾಡಿ ಕಾನೂನು ಸುವ್ಯವಸ್ಥೆ ಹದಗೆಡಿಸುವವರ ವಿರುದ್ಧ ಸೋಮೋಟೊ ಪ್ರಕರಣ ದಾಖಲಿಸಿ ಬಂಧಿಸುವಂತೆ ಪೊಲೀಸರಿಗೆ ಸೂಚಿಸಿದ ಅವರು, ಇಂತಹ ಪ್ರತಿಭಟನೆಗಳಲ್ಲಿ ಅಧಿಕಾರಿಗಳು ಭಾಗವಹಿಸುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.


ಮೂಕಿಹಾಳ ರೈತರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕೆಲ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಅವರು, ಅಧಿಕಾರಿಗಳು ಸರ್ಕಾರದ ನಿಯಮಗಳಂತೆ ಕೆಲಸ ಮಾಡಬೇಕು, ಪ್ರತಿಭಟನೆಗಳನ್ನು ನಿರ್ವಹಿಸುವ ಜವಾಬ್ದಾರಿ ಪೊಲೀಸರದ್ದು ಎಂದು ಸ್ಪಷ್ಟಪಡಿಸಿದರು.


ಕೆಲ ಇಲಾಖೆಗಳ ಅಧಿಕಾರಿಗಳ ಬೇಜವಾಬ್ದಾರಿತನದಿಂದ ಸರ್ಕಾರ ಹಾಗೂ ಜನಪ್ರತಿನಿಧಿಗಳಿಗೆ ಮುಜುಗರವಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಶಾಸಕ, ಇಂತಹ ಘಟನೆಗಳು ಮರುಕಳಿಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.





ನಾಗರಬೆಟ್ಟ ಏತ ನೀರಾವರಿ ಯೋಜನೆ ಕಾಮಗಾರಿ ಕುರಿತು ಕಮಿಷನ್ ಪಡೆದಿರುವ ಆರೋಪ ಸಾಬೀತಾದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ ಎಂದು ಸವಾಲು ಹಾಕಿದ ನಾಡಗೌಡ, “ನಾನು ಮಂತ್ರಿಯಾಗಿದ್ದರೆ 10–15 ಅಧಿಕಾರಿಗಳನ್ನು ಅಮಾನತು ಮಾಡುತ್ತಿದ್ದೆ” ಎಂದು ಕಿಡಿಕಾರಿದರು.


ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ, ಅಧಿಕಾರಿಗಳಿಗೆ ಜನಸೇವೆಗೆ ಆದ್ಯತೆ ನೀಡುವಂತೆ ಹಾಗೂ ಸರ್ಕಾರದ ಅನುದಾನವನ್ನು ಸಮರ್ಪಕವಾಗಿ ಬಳಸುವಂತೆ ಸೂಚಿಸಿದರು.

«
Next
Newer Post
»
Previous
Older Post

No comments:

Leave a Reply