Business

SUDDIGAGI SIDDU NEWS

Theme images by kelvinjay. Powered by Blogger.

ಜನಪ್ರಿಯ ಸುದ್ದಿಗಳು

Life & style

Games

Sports

» »Unlabelled »

ಮುದ್ದೇಬಿಹಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಎಸಿ ಗುರುನಾಥ ದಡ್ಡಿ ಭೇಟಿ: ರೋಗಿಗಳ ಸೇವೆಗೆ ಹೆಚ್ಚಿನ ಆದ್ಯತೆ ನೀಡಲು ಸೂಚನೆ

 

ಮುದ್ದೇಬಿಹಾಳ ಪಟ್ಟಣದ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾ ಉಪವಿಭಾಗಾಧಿಕಾರಿ ಗುರುನಾಥ ದಡ್ಡಿ ಭೇಟಿ ನೀಡಿ ಆರೋಗ್ಯ ಸೇವೆಗಳ ಪರಿಶೀಲನೆ ನಡೆಸಿದರು.


ಆಸ್ಪತ್ರೆಯ ವಿವಿಧ ವಾರ್ಡ್‌ಗಳಿಗೆ ಭೇಟಿ ನೀಡಿ ರೋಗಿಗಳೊಂದಿಗೆ ನೇರವಾಗಿ ಮಾತನಾಡಿದ ಅವರು, ಚಿಕಿತ್ಸೆ, ಔಷಧ ವಿತರಣೆ ಹಾಗೂ ಆಸ್ಪತ್ರೆಯ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದರು.


ಆಸ್ಪತ್ರೆಯಲ್ಲಿ ಯಾವುದೇ ಔಷಧದ ಕೊರತೆ ಇಲ್ಲ. ಅಗತ್ಯವಿದ್ದರೆ ತಕ್ಷಣ ಖರೀದಿಸಲು ವೈದ್ಯಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ ಎಂದು ಅವರು ತಿಳಿಸಿದರು.


ಕುಡಿಯುವ ನೀರು, ಶೌಚಾಲಯ ಹಾಗೂ ಆಸ್ಪತ್ರೆ ಆವರಣದ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.


ಇನ್ನೂ, ಸುಮಾರು 20 ದಿನಗಳೊಳಗೆ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಹೊಸ ಆಂಬ್ಯುಲೆನ್ಸ್ ನೀಡಲಾಗುವುದು ಎಂದು ಭರವಸೆ ನೀಡಿದರು.


ವೈದ್ಯರ ಕೊರತೆ ನಿವಾರಣೆ ಹಾಗೂ ಆಸ್ಪತ್ರೆಯ ಭದ್ರತೆಗಾಗಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದೂ ಅವರು ತಿಳಿಸಿದರು.


«
Next
Newer Post
»
Previous
Older Post

No comments:

Leave a Reply