ಸಾರ್ವಜನಿಕ ಆಸ್ಪತ್ರೆಯಲ್ಲಿ ಕ್ಯಾಂಟೀನ್ ಉದ್ಘಾಟನೆ
ಮುದ್ದೇಬಿಹಾಳ: ಪಟ್ಟಣದ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ನೂತನ ವಾಣಿಜ್ಯ ಸಂಕೀರ್ಣದ ಕ್ಯಾಂಟೀನ್‌ನ್ನು ಶಾಸಕ ಹಾಗೂ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷರಾದ ಸಿ.ಎಸ್. ನಾಡಗೌಡ ಅವರು ಶನಿವಾರ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ನಾಡಗೌಡ ಅವರು, ತಾಲೂಕು ಸಾರ್ವಜನಿಕ ಆಸ್ಪತ್ರೆಯ ಸರ್ವಾಂಗೀಣ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಆಸ್ಪತ್ರೆಯಲ್ಲಿ ನಡೆಯುತ್ತಿರುವ ನವೀಕರಣ ಕಾಮಗಾರಿಯನ್ನು ಪರಿಶೀಲಿಸಿ, ಅಧಿಕಾರಿಗಳಿಂದ ಅಗತ್ಯ ಮಾಹಿತಿಯನ್ನು ಪಡೆದರು.
ಕ್ಯಾಂಟೀನ್ 24×7 ಕಾರ್ಯನಿರ್ವಹಿಸಲಿದ್ದು, ಬಡ ರೋಗಿಗಳು, ಆಸ್ಪತ್ರೆಯ ಸಿಬ್ಬಂದಿ ಹಾಗೂ ರಾತ್ರಿ ವೇಳೆ ಹೆರಿಗೆಗೆ ಬರುವ ಮಹಿಳೆಯರಿಗೆ ಅನುಕೂಲವಾಗಲಿದೆ. ಯೋಗ್ಯ ದರದಲ್ಲಿ ಆಹಾರ ದೊರೆಯುವಂತೆ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರು ಕ್ಯಾಂಟೀನ್‌ನ ಸದುಪಯೋಗ ಪಡೆದುಕೊಂಡು ಸಹಕಾರ ನೀಡಬೇಕು ಎಂದು ತಿಳಿಸಿದರು.
ಕ್ಯಾಂಟೀನ ಮಾಲೀಕರು ಶಾಸಕರಿಗೆ ಸನ್ಮಾನ ಮಾಡಿ ಗೌರವಿಸಿದರು
ಈ ಸಂದರ್ಭದಲ್ಲಿ ದೇವಿಕಾ ಫೌಂಡೇಶನ್ ಅಧ್ಯಕ್ಷೆ ಪಲ್ಲವಿ ನಾಡಗೌಡ, ಕಸಾಪ ಅಧ್ಯಕ್ಷ ಕಾಮರಾಜ, ಪಂಚ ಗ್ಯಾರಂಟಿ ಅಧ್ಯಕ್ಷ ಶಿವಶಂಕರ ಹಿರೇಗೌಡರ, ಉಪಾಧ್ಯಕ್ಷ ಲಕ್ಷ್ಮಣ ಚವ್ಹಾಣ, ಮಹಿಳಾ ಘಟಕದ ಅಧ್ಯಕ್ಷೆ ಅಕ್ಷತಾ ಛಲವಾದಿ ಸೇರಿದಂತೆ ಕಾಂಗ್ರೆಸ್ ಮುಖಂಡರು, ವೈದ್ಯರು, ಆಸ್ಪತ್ರೆ ಸಿಬ್ಬಂದಿ ಹಾಗೂ ಗೆಳೆಯರ ಬಳಗದ ಸದಸ್ಯರು ಮತ್ತು .
ತಾಲೂಕು ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ರಂಗನಾಥ ವೈದ್ಯ, ಡಾ. ಅಬ್ದುಲ್ ಮಾಜಿದ್, ಡಾ. ಸಂಗಮೇಶ ನಾಡಗೌಡ, ಡಾ. ಹಸನ್ ಬೀಳಗಿ, ಡಾ. ಸೀಮಾ ಭಾನು, ಡಾ. ರಿಪತ್ ಕೌಸರ್, ಡಾ. ನಿಸರ್ಗ ಸೇರಿದಂತೆ ಹಲವರು ಉಪಸ್ಥಿತರಿದ್ದರು.





No comments: