Business

SUDDIGAGI SIDDU NEWS

Theme images by kelvinjay. Powered by Blogger.

ಜನಪ್ರಿಯ ಸುದ್ದಿಗಳು

Life & style

Games

Sports

» »Unlabelled »


ಯುವಕರ ಸಂಘಟನೆಗೆ ಭಾರತ್ ಜೋಡೋ ಯುವ ಸಂಘ: ನೋಂದಣಿಗೆ ಕರೆ.


ಮುದ್ದೇಬಿಹಾಳ: ಯುವಜನರನ್ನು ಸಂಘಟಿಸಿ, ಅವರಲ್ಲಿ ಸಾಮಾಜಿಕ ಜವಾಬ್ದಾರಿ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುವ ಉದ್ದೇಶದಿಂದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಭಾರತ್ ಜೋಡೋ ಯುವ ಸಂಘಗಳನ್ನು ರಚಿಸಲಾಗುತ್ತಿದೆ. ಮುದ್ದೇಬಿಹಾಳ ಪಟ್ಟಣದಲ್ಲಿ ಪ್ರತಿ 6 ಸಾವಿರ ಜನಸಂಖ್ಯೆಗೆ ಒಂದರಂತೆ ಯುವ ಸಂಘಗಳನ್ನು ಸ್ಥಾಪಿಸುವ ಪ್ರಕ್ರಿಯೆ ನಡೆಯುತ್ತಿದೆ.
ಈ ಸಂಘಗಳ ಸದಸ್ಯತ್ವ ಪಡೆಯಲು 18ರಿಂದ 35 ವರ್ಷದೊಳಗಿನ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು ತಮ್ಮ ಆಧಾರ್ ಕಾರ್ಡ್ ವಿವರಗಳನ್ನು ನೀಡಿ ಭಾರತ್ ಜೋಡೋ ಪೋರ್ಟಲ್, ಮೊಬೈಲ್ ಆ್ಯಪ್, ಕರ್ನಾಟಕ ಒನ್ ಹಾಗೂ ನಾಗರಿಕ ಸೇವಾ ಕೇಂದ್ರಗಳ ಮೂಲಕ ಹೆಸರು ನೋಂದಾಯಿಸಿಕೊಳ್ಳಬೇಕು.
ಯುವಕರನ್ನು ಒಂದೇ ವೇದಿಕೆಯಲ್ಲಿ ಸಂಘಟಿಸಿ, ಸಮಾಜಮುಖಿ ಕಾರ್ಯಗಳು, ಸಾರ್ವಜನಿಕ ಜಾಗೃತಿ ಕಾರ್ಯಕ್ರಮಗಳು ಹಾಗೂ ವಿವಿಧ ಅಭಿವೃದ್ಧಿ ಚಟುವಟಿಕೆಗಳಲ್ಲಿ ಅವರನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳಲು ಸಂಘಗಳ ರಚನೆಗೆ ಮುಂದಾಗಲಾಗಿದೆ. ಅರ್ಹ ಯುವಕ-ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಂಡು ಯೋಜನೆಯ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ ಮನವಿ ಮಾಡಿದ್ದಾರೆ.
ನೋಂದಣಿ ಪ್ರಕ್ರಿಯೆ ಹಾಗೂ ಸಂಘಗಳ ರಚನೆ ಕುರಿತು ಹೆಚ್ಚಿನ ಮಾಹಿತಿಗಾಗಿ ಮುದ್ದೇಬಿಹಾಳ ಪುರಸಭೆ ಕಚೇರಿಯನ್ನು ಸಂಪರ್ಕಿಸುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

«
Next
Newer Post
»
Previous
Older Post

No comments:

Leave a Reply