ರೈತರನ್ನು ಅವಮಾನಿಸಿದರೆ ಉಗ್ರ ಹೋರಾಟ: ರೈತ ಸಂಘ ಎಚ್ಚರಿಕ
.13ರಂದು ರಾಷ್ಟ್ರೀಯ ಹೆದ್ದಾರಿ ತಡೆದು ಜೈಲ್‌ಭರೋ ಚಳವಳಿ ನಡೆಸುವ ಎಚ್ಚರಿಕೆ
ಮುದ್ದೇಬಿಹಾಳ: ಕಬ್ಬಿನ ಬೆಲೆ ಹೆಚ್ಚಳ ಸೇರಿದಂತೆ ರೈತರ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಅ.13ರಂದು ವಿಜಯಪುರ ಜಿಲ್ಲೆ ಸೇರಿದಂತೆ ರಾಜ್ಯದ ಎಲ್ಲ ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಸ್ತೆ ತಡೆದು ಉಗ್ರ ಹೋರಾಟ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹಾಗೂ ವಿಜಯಪುರ ಜಿಲ್ಲಾ ಘಟಕದ ಅಧ್ಯಕ್ಷ ಸಂಗಮೇಶ ಸಗರ ಎಚ್ಚರಿಕೆ ನೀಡಿದ್ದಾರೆ.
ಪಟ್ಟಣದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅ.12ರಂದು ದೆಹಲಿಯಲ್ಲಿ ನಡೆಯಲಿರುವ ಕಬ್ಬಿನ ಬೆಲೆ ಕುರಿತ ಸಭೆಯಲ್ಲಿ ರೈತಪರ ನಿರ್ಧಾರ ಕೈಗೊಳ್ಳಬೇಕು. ರೈತ ಮುಖಂಡರನ್ನು ಅವಮಾನಿಸುವ ರೀತಿಯಲ್ಲಿ ನಡೆದುಕೊಂಡರೆ ಸಹಿಸುವುದಿಲ್ಲ ಎಂದರು.
ಕಳೆದ 7–8 ವರ್ಷಗಳಿಂದ ಕಬ್ಬಿನ ಬೆಲೆಯಲ್ಲಿ ಸಮರ್ಪಕ ಹೆಚ್ಚಳವಾಗಿಲ್ಲ. ಕಬ್ಬು ಬೆಳೆಯಲು ಟನ್‌ಗೆ ಸುಮಾರು ₹4,000 ವೆಚ್ಚವಾಗುತ್ತದೆ ಎಂದು ತಿಳಿಸಿದ ಅವರು, ಸಕ್ಕರೆ ಕಾರ್ಖಾನೆಗಳಿಂದ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿದರು.
ಯರಗಲ್ಲ ಸಮೀಪದ ಶ್ರೀ ಬಾಲಾಜಿ ಸಕ್ಕರೆ ಕಾರ್ಖಾನೆ ಸೇರಿದಂತೆ ಎಲ್ಲ ಕಾರ್ಖಾನೆಗಳಲ್ಲಿ ಕಬ್ಬಿನ ತೂಕದ ಮೋಸ ಹಾಗೂ ಕಾರ್ಮಿಕರ ಶೋಷಣೆ ತಡೆಯಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ರಸ್ತೆ ತಡೆ ಹಾಗೂ ಜೈಲ್‌ಭರೋ ಚಳವಳಿ ನಡೆಸುವುದಾಗಿ ಎಚ್ಚರಿಸಿದರು.




No comments: